ಬೆಂಗಳೂರು : ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಶಾಕ್ ಕೊಟ್ಟಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾನು ಸ್ವತಂತ್ರವಾಗಿ ಸ್ಪರ್ಧಿಸೋದಾಗಿ ಹೇಳಿಕೆ ನೀಡಿದ್ದಾರೆ.
ಹೈಕಮಾಂಡ್ ಕರೆ ಹಿನ್ನೆಲೆ ಇಂದು ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದು ವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
ಅಲ್ಲಿ ಸ್ಪರ್ಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ. ನಾವೆಲ್ಲರೂ ಸಮಾನ ಮನಸ್ಕರು ಸಭೆ ಸೇರಿದ್ದೇವೆ. ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡಬಾರದು. ಆ ಕ್ಷೇತ್ರವನ್ನು ಎನ್‌ಡಿಎ ವಶಕ್ಕೆ ತಗೊಳ್ಳಬೇಕು ಎಂದು ನಿರ್ಣಯಿಸಿದ್ದೇವೆ. ಇದೇ ಕಾರಣಕ್ಕೆ ನಾನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮನಸ್ಸು ಮಾಡಿದ್ದೇನೆ. ಅದಕ್ಕಾಗಿ ಇಂದು ದಿಲ್ಲಿಗೆ ತೆರಳುತ್ತಿದ್ದೇನೆ. ಅಲ್ಲಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ ಎಂದಿದ್ದಾರೆ.
ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದುವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈಗಾಗಲೇ ನಮ್ಮ ಕ್ಷೇತ್ರದ ಜನರು ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲ ಎಂದಾದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್‌ಗೆ ಸೇರಲ್ಲ. ಇದುವರೆಗೆ ನನ್ನನ್ನು ಯಾವುದೇ ಕಾಂಗ್ರೆಸ್ ನಾಯಕರು ಸಂಪರ್ಕಿಸಿಲ್ಲ ಎಂದು ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ.