Tuesday, July 21, 2026
Homeಕರಾವಳಿಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಮಂಗಳೂರಿನಲ್ಲಿ ಸಿಪಿಐ ಮಾನವ ಸರಪಳಿ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಮಂಗಳೂರಿನಲ್ಲಿ ಸಿಪಿಐ ಮಾನವ ಸರಪಳಿ

- Advertisement -
- Advertisement -

ಮಂಗಳೂರು: ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಸರ್ಕಾರದ ಕ್ರಮವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ಸೋಮವಾರ ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಎದುರು ಬೃಹತ್ ಪ್ರತಿಭಟನೆ ಹಾಗೂ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವೆನ್ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಮತ್ತು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ವರ್ಷಗಳಿಂದ ದುಡಿಯುತ್ತಿರುವ ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಎಂದು ಪ್ರತಿಭಟನಾಕಾರರು ತೀವ್ರವಾಗಿ ಒತ್ತಾಯಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಆರೋಗ್ಯ ಕ್ಷೇತ್ರದ ಖಾಸಗೀಕರಣವು ಸಂವಿಧಾನಬದ್ಧ ಸಮಾನ ಆರೋಗ್ಯ ಹಕ್ಕಿಗೆ ಧಕ್ಕೆ ತರಲಿದ್ದು, ಬಡವರ ಆಸರೆಯಾಗಿರುವ ಸರ್ಕಾರಿ ಆಸ್ಪತ್ರೆಗಳನ್ನು ದುರ್ಬಲಗೊಳಿಸದೆ ಆಧುನೀಕರಿಸಬೇಕು ಎಂದರು.

ಪಕ್ಷದ ಮುಖಂಡ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, ಜಿಲ್ಲೆಯಲ್ಲಿ ಜಯದೇವ ಮತ್ತು ಕಿದ್ವಾಯಿ ಘಟಕಗಳನ್ನು ಆರಂಭಿಸುವುದರಿಂದ ಹೃದಯ ಹಾಗೂ ಕ್ಯಾನ್ಸರ್ ಚಿಕಿತ್ಸೆಗೆ ದೂರದ ನಗರಗಳಿಗೆ ಅಲೆಯುವ ಸಾವಿರಾರು ಬಡ ರೋಗಿಗಳಿಗೆ ದೊಡ್ಡ ಅನುಕೂಲವಾಗಲಿದೆ ಎಂದು ಹೇಳಿದರು. ಈ ಸಭೆಯಲ್ಲಿ ಸಂತೋಷ್ ಬಜಾಲ್, ಬಿ.ಕೆ. ಇಮ್ತಿಯಾಜ್, ಪ್ರಮೀಳಾ ಶಕ್ತಿನಗರ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಅನೇಕ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದರು.

- Advertisement -

Latest News

error: Content is protected !!