Saturday, June 6, 2026
Homeತಾಜಾ ಸುದ್ದಿಈ ಬಾರಿ ದೀಪಾವಳಿ ಹಬ್ಬದ ವೇಳೆ 'ಪಟಾಕಿ' ಹಚ್ಚುವಂತಿಲ್ಲ: ಸಿಎಂ ಯಡಿಯೂರಪ್ಪರಿಂದ ಮಹತ್ವದ ಆದೇಶ

ಈ ಬಾರಿ ದೀಪಾವಳಿ ಹಬ್ಬದ ವೇಳೆ ‘ಪಟಾಕಿ’ ಹಚ್ಚುವಂತಿಲ್ಲ: ಸಿಎಂ ಯಡಿಯೂರಪ್ಪರಿಂದ ಮಹತ್ವದ ಆದೇಶ

- Advertisement -
- Advertisement -

ಬೆಂಗಳೂರು: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬದ ವೇಳೆ ರಾಜ್ಯದಲ್ಲಿ ಪಟಾಕಿ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ದೀಪಾವಳಿ ಹಬ್ಬದ ವೇಳೆ ಪಟಾಕಿ ಮಾರುವಂತಿಲ್ಲ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ ಪಟಾಕಿ ನಿಷೇಧಿಸಲು ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದ್ದು, ಶೀಘ್ರದಲ್ಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಹೇಳಿದ್ದಾರೆ.

ದೆಹಲಿ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಪಟಾಕಿ ನಿಷೇಧಿಸಿದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ವಾಯುಮಾಲಿನ್ಯ ಹಾಗೂ ಕೊರೊನಾ ವೈರಸ್ ಹರಡುವಿಕೆ ತಡೆಯಬಹುದು. ಪಟಾಕಿ ನಿಷೇಧಿಸುವ ಕುರಿತು ರಾಜ್ಯ ಸರಕಾರ ಆರೋಗ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಜೊತೆ ಚರ್ಚೆ ನಡೆಸಿದ ನಂತರ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

- Advertisement -

Latest News

error: Content is protected !!