Sunday, February 16, 2025
Homeಕರಾವಳಿಮಂಗಳೂರುಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಹೊಂಡಕ್ಕೆ ಬಿದ್ದ ಕ್ರೇನ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಹೊಂಡಕ್ಕೆ ಬಿದ್ದ ಕ್ರೇನ್

spot_img
- Advertisement -
- Advertisement -

ಮಂಗಳೂರು: ಕ್ರೇನೊಂದು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಹೊಂಡಕ್ಕೆ ಬಿದ್ದ ಘಟನೆ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ನಡೆದಿದೆ.

ಅದ್ಯಪಾಡಿಯಿಂದ ಕೆಂಜಾರಿಗೆ ಬರುತ್ತಿದ್ದ ಕ್ರೇನ್‌ ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಹೆದ್ದಾರಿ 67ರ ಬದಿಯ ರಕ್ಷಣಾ ತಡೆಗೋಡೆಗೆ ಢಿಕ್ಕಿ ಹೊಡೆದು ಸುಮಾರು 20 ಅಡಿ ಅಳದ ಹೊಂಡಕ್ಕೆ ಬಿದ್ದಿದೆ. ಪರಿಣಾಮ ಆಪರೇಟರ್‌ಗೆ ಗಂಭೀರ ಗಾಯವಾಗಿದೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ರೇನ್‌ ಅಡಿಗೆ ಸಿಲುಕಿಕೊಂಡ ಚಾಲಕನನ್ನುಮೇಲೆಕ್ಕೆತ್ತಲು ಸುಮಾರು ಅರ್ಧ ಗಂಟೆ ಕಾರ್ಯಾಚರಣೆ ಮಾಡಲಾಗಿದೆ. ಇನ್ನೊಂದು ಕ್ರೇನ್‌ ಮೂಲಕ ಮೇಲಕ್ಕೆತ್ತಿ ಅದರಡಿಗೆ ಸಿಲುಕಿಕೊಂಡ ಅಪರೇಟರ್‌ ಅವರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಲಾಯಿತು. ಅಪರೇಟರ್‌ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳಕ್ಕೆ ಆ್ಯಂಬುಲೆನ್ಸ್‌ ಬರಲು ಅರ್ಧ ತಾಸು ವಿಳಂಬವಾಗಿತ್ತು.

- Advertisement -
spot_img

Latest News

error: Content is protected !!