Tuesday, June 9, 2026
Homeತಾಜಾ ಸುದ್ದಿದಯವಿಟ್ಟು.. ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ದಯವಿಟ್ಟು.. ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

- Advertisement -
- Advertisement -

ಬೆಳಗಾವಿ:  ಕಾಂಗ್ರೆಸ್, ಬಿಜೆಪಿ ನಾಯಕರ ವಿರುದ್ಧ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದಯವಿಟ್ಟು.. ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ ಎಂದು ವ್ಯಂಗ್ಯವಾಡಿದರು.

ಇತ್ತೀಚೆಗೆ ಕಾಂಗ್ರೆಸ್ ನೀಡಿದ, ಚಡ್ಡಿ ಸುಡುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರಿಗೆ ಚಡ್ಡಿ ಬಿಚ್ಚಿದ್ರೇ ಏನೂ ಸಿಗುತ್ತೆ. ಕಾಂಗ್ರೆಸ್ ಅವರು ಚಡ್ಡಿ ಸುಟ್ರೂ, ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ಚಡ್ಡಿ ಉದುರಿಸಿದ್ದೇವೆ ಅಂತಾರೆ. ಮೊದಲು ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ ಎಂದು ಟೀಕಿಸಿದರು.

ದಯವಿಟ್ಟು, ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ. ರಾಜ್ಯದ ಜನತೆ ಗೌರವವಾಗಿ ಬದುಕುವ ವಾತಾವರಣ ನಿರ್ಮಾಣ ಮಾಡಿ. ನಿಮ್ಮ ನಿಮ್ಮ ಚಡ್ಡಿ ಬಿಚ್ಚಿಕೊಳ್ಳಿ ತೊಂದರೆ ಇಲ್ಲ. ರಾಜ್ಯದ ಜನತೆಗೆ ಅವಮಾನ ಆಗದ ರೀತಿ ಜನಗಳ ಚಡ್ಡಿ ಬಿಚ್ಚಬೇಡಿ ಎಂದರು.

- Advertisement -

Latest News

error: Content is protected !!