Sunday, June 7, 2026
Homeಕ್ರೀಡೆಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ 'ಕಪಿಲ್ ದೇವ್'ಗೆ ಹೃದಯಾಘಾತ

ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ‘ಕಪಿಲ್ ದೇವ್’ಗೆ ಹೃದಯಾಘಾತ

- Advertisement -
- Advertisement -

ನವದೆಹಲಿ: ಭಾರತದ ಮಾಜಿ ನಾಯಕ ಹಾಗೂ ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತ ಉಂಟಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.

ಕಪಿಲ್‌ ದೇವ್‌ ಅವರಿಗೆಗೆ ಹೃದಯಾಘಾತವಾಗಿರುವ ವಿಚಾರವನ್ನು ಖ್ಯಾತ ಪತ್ರಕರ್ತೆ ಟೀನಾ ಠಾಕರ್ ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, 61 ವರ್ಷದ ಕಪಿಲ್ ದೇವ್ ಅವರನ್ನು ಹೊಸದಿಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

1959ರ ಜನವರಿ 6ರಂದು ಚಂಡೀಗಢದಲ್ಲಿ ಜನಿಸಿದ್ದ ಕಪಿಲ್ ದೇವ್, 1978ರಲ್ಲಿ ಪಾಕಿಸ್ಥಾನ ವಿರುದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. 1983ರಲ್ಲಿ ವೆಸ್ಟ್ ಇಂಡೀಸ್ ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ನಲ್ಲಿ ಕಪಿಲ್ ದೇವ್ ನಾಯಕತ್ವದ ಭಾರತ ತಂಡ ಮೊದಲ ಬಾರಿಗೆ ವಿಶ್ವಕಪ್ ಎತ್ತಿ ಹಿಡಿದಿತ್ತು. ಫೈನಲ್ ಪಂದ್ಯದಲ್ಲಿ ಭಾರತ ಬಲಿಷ್ಠ ವೆಸ್ಟ್ ಇಂಡೀಸ್ ವಿರುದ್ಧ ರೋಚಕ ಜಯ ಸಾಧಿಸಿತ್ತು.

- Advertisement -

Latest News

error: Content is protected !!