Saturday, June 6, 2026
Homeಪ್ರಮುಖ-ಸುದ್ದಿಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿಯಿಂದ ಟಿಕೆಟ್‌

ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿಯಿಂದ ಟಿಕೆಟ್‌

- Advertisement -
- Advertisement -

ಗುಜರಾತ್:‌ ಟೀಂ ಇಂಡಿಯಾದ ಸ್ಟಾರ್ ಆಲ್‍ರೌಂಡರ್ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಅವರಿಗೆ ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಕ್ಕಿದೆ. ಗುಜರಾತ್‍ನ ಜಮ್ನಗರ ಉತ್ತರದಿಂದ ರಿವಾಬಾ ಜಡೇಜಾ ಸ್ಪರ್ಧಿಸಲಿದ್ದಾರೆ.

ರಿವಾಬಾ ಜಡೇಜಾ ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರೆ. ಅಲ್ಲದೇ ಕಾಂಗ್ರೆಸ್ ಹಿರಿಯ ಆಯಕ ಹರಿಸಿಂಗ್ ಸೋಲಂಕಿ ಅವರ ಸಂಬಂಧಿಯಾಗಿದ್ದಾರೆ. ರಿವಾಬಾ ಜಡೇಜಾರನ್ನು ಬಿಜೆಪಿ ನಾಯಕರಾದ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದರು. ಇದೀಗ ಬಿಜೆಪಿ ಟಿಕೆಟ್ ನೀಡಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದೆ.

- Advertisement -

Latest News

error: Content is protected !!