Saturday, May 11, 2024
HomeUncategorizedಕರ್ನಾಟಕ-ಕೇರಳ ಗಡಿ ಭಾಗಕ್ಕೆ ಹೊಂದಿರುವ ಕೊಡಗು ಜಿಲ್ಲೆ ಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ: ವಿಧಾನಸಭೆಯಲ್ಲಿ ಗೃಹ...

ಕರ್ನಾಟಕ-ಕೇರಳ ಗಡಿ ಭಾಗಕ್ಕೆ ಹೊಂದಿರುವ ಕೊಡಗು ಜಿಲ್ಲೆ ಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ: ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ

spot_img
- Advertisement -
- Advertisement -

ಬೆಂಗಳೂರು: ಕೇರಳ ರಾಜ್ಯದ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದ್ಯ ಗಮನ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಇಂದು ಸದನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಪರಾಧಿಗಳ ಮೇಲೆ ಕಣ್ಗಾವಲು ಇಡಲು, ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಗಳನ್ನು ಆಳವಡಿಸುವ ಬಗ್ಗೆ ಪರೀಶಿಸಲಾಗುವುದು ಎಂದರು.

ಕೊಡಗು ಜಿಲ್ಲೆಯಲ್ಲಿ 2021 ರಲ್ಲಿ ಒಟ್ಟು 1684 ಅಪರಾಧ ಪ್ರಕರಣಗಳು ದಾಖಲಾಗಿದ್ದು, 1617 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2022 ಆಗಸ್ಟ್ ತಿಂಗಳ ಅಂತ್ಯದ ವರೆಗೆ ಒಟ್ಟು 1122 ಪ್ರಕರಣಗಳು ವರದಿಯಾಗಿವೆ ಹಾಗೂ 870 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಗೃಹ ಸಚಿವರು ಸದನಕ್ಕೆ ತಿಳಿಸಿದರು. ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅವರೂ ಸದನದಲ್ಲಿ ಈ ವಿಷಯದ ಬಗ್ಗೆ ಮಾತನಾಡಿದರು.

- Advertisement -
spot_img

Latest News

error: Content is protected !!