Wednesday, July 15, 2026
Homeಕರಾವಳಿಮಂಗಳೂರು: ಡಿವೈಡರ್‌ಗೆ ಸ್ಕೂಟರ್‌ ಡಿಕ್ಕಿ: ಗಂಭೀರ ಗಾಯಗೊಂಡ ಸವಾರ ಮೃತ್ಯು

ಮಂಗಳೂರು: ಡಿವೈಡರ್‌ಗೆ ಸ್ಕೂಟರ್‌ ಡಿಕ್ಕಿ: ಗಂಭೀರ ಗಾಯಗೊಂಡ ಸವಾರ ಮೃತ್ಯು

- Advertisement -
- Advertisement -

ಮಂಗಳೂರು: ಸ್ಕೂಟರ್‌ ಚಲಾಯಿಸುತ್ತಿದ್ದಾಗ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಸ್ಕೂಟರ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಶರ್ಬತ್ ಕಟ್ಟೆ ಎಂಬಲ್ಲಿ ಸಂಭವಿಸಿದೆ.

ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಎಂಬುವವರು ಮೃತಪಟ್ಟವರು. ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡ ನರಸಿಂಹ ಗಟ್ಟಿಯವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

- Advertisement -

Latest News

error: Content is protected !!