Monday, May 13, 2024
Homeತಾಜಾ ಸುದ್ದಿಅಕ್ಟೋಬರ್‌ 28ರಂದು ಕೋಟಿ ಕಂಠ ಗಾಯನ ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್...

ಅಕ್ಟೋಬರ್‌ 28ರಂದು ಕೋಟಿ ಕಂಠ ಗಾಯನ ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು : ರಾಜ್ಯದ ಸಾಂಸ್ಕೃತಿಕ ಲೋಕದಲ್ಲೇ ವಿನೂತನವಾದ ಕೋಟಿ ಕಂಠ ಗಾಯನ ಎಂಬ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದು ಅಕ್ಟೋಬರ್‌ 28 ರಂದು ನಾಡಿನಾದ್ಯಂತ ಏಕಕಾಲದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ಕಳೆದ ವರ್ಷ ಮಾತಾಡ್‌ ಮಾತಾಡ್‌ ಕನ್ನಡ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಲಕ್ಷಕಂಠ ಗಾಯನಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಹೀಗಾಗಿ ರಾಜ್ಯೋತ್ಸವ ಪ್ರಯುಕ್ತ ಮತ್ತೆ ಈ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ.

ಅಂದು ಏಕಕಾಲದಲ್ಲಿ ರಾಜ್ಯಾದ್ಯಂತ ಕೋಟಿ ಕಂಠಗಳಲ್ಲಿ ಕನ್ನಡ ಗೀತೆಗಳನ್ನು ಪ್ರಸ್ತುತಪಡಿಸುವ ಮಹತ್ವದ ನಿರ್ಧಾರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತೆಗೆದುಕೊಂಡಿದೆ.

ಅಕ್ಟೋಬರ್‌ 28ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ, ಡಾ. ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ, ಡಾ. ಡಿ.ಎಸ್. ಕರ್ಕಿಯವರ ಹಚ್ಚೇವು ಕನ್ನಡದ ದೀಪ ಹಾಗೂ ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಐದು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ.

ಈ ಅಭಿಯಾನ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳು, ತಾಲೂಕು ಕೇಂದ್ರಗಳು, ದೆಹಲಿ ಕನ್ನಡ ಸಂಘ, ಹೊರನಾಡು, ಗಡಿನಾಡ ಸಂಘಗಳ ಕಚೇರಿ, ವಿಧಾನಸೌಧದ ಮೆಟ್ಟಿಲು ಹಾಗೂ ವಿಧಾನಸೌಧ-ವಿಕಾಸ ಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಮೂಹ ಗಾಯನ ನಡೆಸಲಿದ್ದಾರೆ.

- Advertisement -
spot_img

Latest News

error: Content is protected !!