Tuesday, April 30, 2024
Homeಕರಾವಳಿಸಿಆರ್‌ಝೆಡ್ ಯೋಜನೆ ಅನುಮೋದನೆ ಕರಾವಳಿ ಪ್ರವಾಸೋದ್ಯಮಕ್ಕೆ ಬೂಸ್ಟ್ : ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿಕೆ

ಸಿಆರ್‌ಝೆಡ್ ಯೋಜನೆ ಅನುಮೋದನೆ ಕರಾವಳಿ ಪ್ರವಾಸೋದ್ಯಮಕ್ಕೆ ಬೂಸ್ಟ್ : ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು: ಕರಾವಳಿ ನಿಯಂತ್ರಣ ವಲಯದ(ಸಿಆರ್‌ಝೆಡ್) 2019ರ ಪ್ರಸ್ತಾವನೆಗೆ ಅನುಮೋದನೆ ಪಡೆದ ದೇಶದ ಎರಡನೇ ಹಾಗೂ ದಕ್ಷಿಣ ಭಾರತದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಈ ಪ್ರದೇಶಗಳಲ್ಲಿ ಇನ್ಮುಂದೆ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಳ್ಳಲು ಹೆಚ್ಚಿನ ಅವಕಾಶಗಳು ದೊರೆತಂತಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ವಿಧಾನಸೌಧದ ಬ್ಯಾಕ್ವೆಂಟ್ ನಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರದ ನಿರಂತರ ಪ್ರಯತ್ನದಿಂದಾಗಿ ಸಿಆರ್‌ಝೆಡ್ 2019ರ ಅಧಿಸೂಚನೆ ಅನುಷ್ಠಾನಕ್ಕೆ ಅವಶ್ಯವಿದ್ದ ಕರಾವಳಿ ವಲಯ ನಿರ್ವಹಣಾ ಯೋಜನೆಗೆ ತ್ವರಿತಗತಿಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ. ಈ ಯೋಜನೆ ಅನುಷ್ಠಾನದಿಂದ ಇನ್ನು ಮುಂದೆ ರಾಜ್ಯದಲ್ಲಿ ಸಮುದ್ರ ತೀರ ಪ್ರದೇಶದ ಪ್ರವಾಸಿ, ವಾಣಿಜ್ಯೋದ್ಯಮದ ಚಟುವಟಿಕೆಗಳು ಗರಿಗೆದರಲಿವೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

ಕೋವಿಡ್ ಪಿಡುಗು ನಮ್ಮ ಪ್ರವಾಸೋದ್ಯಮ ವಲಯಕ್ಕೆ ಮಾರಣಾಂತಿಕ ಹೊಡೆತವನ್ನು ವಿಶ್ವದಾದ್ಯಂತ ನೀಡಿತ್ತು, ಇದಕ್ಕೆ ನಮ್ಮ ರಾಜ್ಯ ಕೂಡ ಹೊರತಲ್ಲ. ಆದರೂ, ನಮ್ಮ ರಾಜ್ಯದಲ್ಲಿ ಪ್ರವಾಸೋದ್ಯಮ ವಲಯವು ತೀವ್ರಗತಿಯಲ್ಲಿ ಚೇತರಿಕೆ ಕಂಡಿದೆ ಎಂದು ಪ್ರವಾಸೋದ್ಯಮ ಸಚಿವರು ಹೇಳಿದ್ದಾರೆ.

- Advertisement -
spot_img

Latest News

error: Content is protected !!