Tuesday, May 7, 2024
Homeತಾಜಾ ಸುದ್ದಿಮೂರನೇ ಪರೀಕ್ಷೆಯಲ್ಲಿ ಸಚಿವ ಸಿ.ಟಿ.ರವಿಗೆ ಕೊರೋನಾ ದೃಢ: ಪತ್ನಿ, ಗನ್-ಮ್ಯಾನ್, ಚಾಲಕರು ಸೇಫ್

ಮೂರನೇ ಪರೀಕ್ಷೆಯಲ್ಲಿ ಸಚಿವ ಸಿ.ಟಿ.ರವಿಗೆ ಕೊರೋನಾ ದೃಢ: ಪತ್ನಿ, ಗನ್-ಮ್ಯಾನ್, ಚಾಲಕರು ಸೇಫ್

spot_img
- Advertisement -
- Advertisement -

ಚಿಕ್ಕಮಗಳೂರು: ಸಚಿವ ಸಿ ಟಿ ರವಿ ಅವರಿಗೆ ಮೂರನೇ ಬಾರಿಯ ಪರೀಕ್ಷೆ ನಡೆಸಿದಾಗಲೂ ಕೋವಿಡ್ ಪಾಸಿಟಿವ್ ಎಂದು ವರದಿಯಾಗಿದೆ. ಈ ಹಿಂದೆ ನಡೆಸಿದ ಪರೀಕ್ಷೆಯಲ್ಲೂ ಸೋಂಕು ತಗುಲಿರುವುದು ದೃಢವಾಗಿದೆ.

ಈ ಕುರಿತು ಸ್ವತಃ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

“ನಿನ್ನೆ ನಾನು, ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್19 ಪರೀಕ್ಷೆಗೆ ಒಳಪಟ್ಟಿದ್ದೆವು. ಪಲ್ಲವಿ ಹಾಗೂ ನನ್ನ ಗನ್-ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲರದು ನೆಗೆಟಿವ್ ಬಂದಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಮನೆಯಿಂದಲೇ ಕೆಲಸ:
“ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ” ಎಂದು ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

- Advertisement -
spot_img

Latest News

error: Content is protected !!