Thursday, June 4, 2026
Homeತಾಜಾ ಸುದ್ದಿಹೈಕೋರ್ಟ್‌ನಿಂದ ಸಿ.ಟಿ ರವಿಯನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಆದೇಶ

ಹೈಕೋರ್ಟ್‌ನಿಂದ ಸಿ.ಟಿ ರವಿಯನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಆದೇಶ

- Advertisement -
- Advertisement -

ಬೆಂಗಳೂರು: ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದು, ಇದೀಗ ಅವರನ್ನು ತತ್ ಕ್ಷಣ ಬಿಡುಗಡೆ ಮಾಡಲು ಕರ್ನಾಟಕ ಹೈಕೋರ್ಟ್ ಡಿ.20 ಶುಕ್ರವಾರದಂದು ಸಂಜೆ ಆದೇಶ ಮಾಡಿದೆ.

ಹೈಕೋರ್ಟ್ ಷರತ್ತನ್ನು ವಿಧಿಸಿ ಆದೇಶವನ್ನು ಹೊರಡಿಸಿದ್ದು, ‘ಆರೋಪಿ ಸ್ಥಾನದಲ್ಲಿರುವ ಸಿ.ಟಿ.ರವಿ ಅವರು ತನಿಖೆಗೆ ಸಹಕರಿಸಬೇಕು, ತನಿಖಾಧಿಕಾರಿ ಕರೆದಾಗ ವಿಚಾರಣೆಗೆ ಹಾಜರಾಗಬೇಕು,’ ಷರತ್ತಿನಲ್ಲಿ ತಿಳಿಸಲಾಗಿದೆ.   

ಇದೀಗ ಸಿ.ಟಿ.ರವಿ ಅವರಿಗೆ ಈ ವಿಚಾರದಲ್ಲಿ ಹೈಕೋರ್ಟ್ ಆದೇಶದಿಂದ ಬಿಗ್ ರಿಲೀಪ್ ಸಿಕ್ಕಿದೆ.ಪೊಲೀಸರು ಸಿ.ಟಿ.ರವಿ ಅವರನ್ನು ಬೆಳಗಾವಿಯಿಂದ ರಸ್ತೆ ಮಾರ್ಗದ ಮೂಲಕ ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ.

ಅಷ್ಟೇಅಲ್ಲದೆ ಸಿ.ಟಿ.ರವಿ ಅವರ ಪರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಡಿ.21 ಶನಿವಾರದಂದು ಮುಂದೂಡಲಾಗಿದೆ.

- Advertisement -

Latest News

error: Content is protected !!