- Advertisement -
- Advertisement -
ಬೆಂಗಳೂರು: ಕೊರೊನಾ ಸಂಬಂಧ ತಬ್ಲಿಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು ಎಂದು ಕನ್ನಡ ಮತ್ತು ಸಂಸ್ಕತಿ ಖಾತೆಯ ಸಚಿವ ಸಿಟಿ ರವಿ ಪ್ರಶ್ನಿಸಿದ್ದಾರೆ.
ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ ವಿಚಾರಕ್ಕೆ, ಕೊರೊನಾ ಸಂಬಂಧ ತಬ್ಲಿಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ.

ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನನ್ನ ಸಹೋದ್ಯೋಗಿಗಳಾದ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ತಬ್ಲಿಘಿಗಳ ವರ್ತನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅವರ ವಿರುದ್ಧ ಮಾತನಾಡಿದ ಕಾರ್ಯಕರ್ತರ ಬೆಂಬಲಕ್ಕೆ ನಾನು ನಿಲ್ಲುತ್ತೇನೆ. ಇದೆ ನನ್ನ ಪ್ರಥಮ ಆದ್ಯತೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಏ.9 ರಂದು ಟ್ವೀಟ್ ಮಾಡಿದ್ದರು.

- Advertisement -