Tuesday, August 11, 2026
Homeಪ್ರಮುಖ-ಸುದ್ದಿತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಶಿಫಾರಸು

ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಶಿಫಾರಸು

- Advertisement -
- Advertisement -

ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ಕಾವೇರಿ ನೀರನ್ನು ಹರಿಯಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿದೆ.

ಇಂದು ನಡೆದ ಸಮಿತಿಯ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳು ತಮ್ಮ ವಾದಗಳನ್ನು ಮಂಡಿಸಿದವು. ರಾಜ್ಯದಲ್ಲಿ ಮಳೆಯ ಅಭಾವ, ಜಲಾಶಯಗಳಲ್ಲಿ ಕನಿಷ್ಠ ಮಟ್ಟಕ್ಕೆ ತಲುಪಿರುವ ನೀರಿನ ಸಂಗ್ರಹ ಹಾಗೂ ಎದುರಾಗಿರುವ ಭೀಕರ ಬರಗಾಲದ ಪರಿಸ್ಥಿತಿಯನ್ನು ಕರ್ನಾಟಕ ಸ್ಪಷ್ಟವಾಗಿ ಮನವರಿಕೆ ಮಾಡಿಕೊಟ್ಟಿತ್ತು. ಆದಾಗ್ಯೂ, ತಮಿಳುನಾಡಿಗೆ ನೀರು ಬಿಡುವಂತೆ CWRC ಶಿಫಾರಸು ಮಾಡಿದೆ.

ಈ ಆದೇಶವನ್ನು ರಾಜ್ಯ ಸರ್ಕಾರ ಬಲವಾಗಿ ವಿರೋಧಿಸಿದ್ದು, ಇಂದು ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ ಸಮಿತಿಯ ನಿರ್ಧಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ.

- Advertisement -

Latest News

error: Content is protected !!