Thursday, June 4, 2026
Homeತಾಜಾ ಸುದ್ದಿಮಂಗಳೂರು: ಸೈಬರ್ ವಂಚಕರಿಗೆ ಸಹಕರಿಸುತ್ತಿದ್ದ ಕೇರಳದ ಇಬ್ಬರು ಅರೆಸ್ಟ್

ಮಂಗಳೂರು: ಸೈಬರ್ ವಂಚಕರಿಗೆ ಸಹಕರಿಸುತ್ತಿದ್ದ ಕೇರಳದ ಇಬ್ಬರು ಅರೆಸ್ಟ್

- Advertisement -
- Advertisement -

ಮಂಗಳೂರು: ಸೈಬರ್ ವಂಚಕರಿಗೆ ಸಹಕರಿಸುತ್ತಿದ್ದ ಕೇರಳದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಕೇರಳ ಕಣ್ಣೂರಿನ ಪತಾಯಕುನ್ನು ಉಮ್ಮರ್ ವಲಿಯ ಪರಂಬತ್ (41) ರಿಯಾಝ್ ಎಂ.ವಿ. (45) ಬಂಧಿತರು

ಆರೋಪಿಗಳು ಷೇರು ಮಾರುಕಟ್ಟೆಯಲ್ಲಿ ಲಾಭದ ಆಸೆ ತೋರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 77 ಲಕ್ಷ ಹಣ ವಂಚನೆ ಮಾಡಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂಬ ವಾಟ್ಸ್‌ಆ್ಯಪ್ ಸಂದೇಶವನ್ನು ಗಮನಿಸಿದ ವ್ಯಕ್ತಿಯು ಹಂತ ಹಂತವಾಗಿ 77,96,322.08 ರೂ.ವನ್ನು ಪಾವತಿಸಿದ್ದರು. ಆದರೆ ಆರೋಪಿಗಳು ಲಾಭಾಂಶ ನೀಡದೆ ವಂಚಿಸಿದ್ದರು. ಈ ಬಗ್ಗೆ ಹಣ ಕಳೆದುಕೊಂಡ ವ್ಯಕ್ತಿಯು ಸೆನ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆ ಆದ ಬ್ಯಾಂಕ್ ಖಾತೆ ಪರಿಶೀಲನೆ ವೇಳೆ ಈ ಇಬ್ಬರು ಯುವಕರು ಸಿಕ್ಕಿಹಾಕಿಕೊಂಡಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಗೆ 26,27,114 ಹಣ ವರ್ಗಾವಣೆಯಾಗಿತ್ತು. ಬಳಿಕ ಈ ಖಾತೆಯಿಂದ ಉಮರ್ ವಲಿಯ ಪರಂಬತ್ ಎಂಬಾತನ ಬ್ಯಾಂಕ್ ಖಾತೆಗೆ 6 ಲಕ್ಷ ರೂ. ಟ್ರಾನ್ಫರ್ ಆಗಿತ್ತು. ತನಿಖೆ ಕೈಗೊಂಡಾಗ ರಿಯಾಝ್ ಎಂ.ವಿ. ಎಂಬಾತನು ಹಣವನ್ನು ವರ್ಗಾವಣೆ ಮಾಡಿಸಿದ್ದ ಅನ್ನೋದು ಗೊತ್ತಾಗಿದೆ.  ಹೀಗೆ ಈ ಪ್ರಕರಣದಲ್ಲಿ ಭಾಗಿಯಾದ ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Latest News

error: Content is protected !!