- Advertisement -
- Advertisement -
ಮಂಗಳೂರು: ಕೇರಳ ಲಾಟರಿಯಲ್ಲಿ 8 ಲಕ್ಷ ರೂಪಾಯಿ ಬಹುಮಾನ ಬಂದಿದೆ ಎಂದು ನಂಬಿಸಿ 42 ವರ್ಷದ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ 3.81 ಲಕ್ಷ ರೂಪಾಯಿಗೂ ಅಧಿಕ ಹಣ ಪಡೆದು ವಂಚಿಸಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು ಅಪರಿಚಿತ ವ್ಯಕ್ತಿಯೊಬ್ಬ ಸಂತ್ರಸ್ತರಿಗೆ ಕರೆ ಮಾಡಿ, ಲಾಟರಿ ಹಣ ಪಡೆಯಲು ಆದಾಯ ತೆರಿಗೆ ಹಾಗೂ ಪ್ರಕ್ರಿಯೆ ವೆಚ್ಚ ಪಾವತಿಸುವಂತೆ ಸೂಚಿಸಿದ್ದಾನೆ. ಇದನ್ನು ನಿಜವೆಂದು ನಂಬಿದ ಅವರು, ಆಗಸ್ಟ್ 15 ರಿಂದ 26ರ ವರೆಗೆ ವಿವಿಧ ಕ್ಯೂಆರ್ ಕೋಡ್, ಗೂಗಲ್ ಪೇ ಹಾಗೂ ಫೋನ್ ಪೇ ಮೂಲಕ ಒಟ್ಟು 3,81,300 ರೂಪಾಯಿ ವರ್ಗಾಯಿಸಿದ್ದಾರೆ.
ಬಳಿಕ ವಂಚಕರು ಬಹುಮಾನದ ಮೊತ್ತ ದ್ವಿಗುಣಗೊಂಡಿದೆ ಎಂದು ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನಗೊಂಡು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಬಳಿಕ ಹಣ ವಾಪಸ್ ಬಾರದಿದ್ದಾಗ ಮಂಗಳೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Advertisement -


