Saturday, April 27, 2024
Homeಕರಾವಳಿತೌಕ್ತೇ ಚಂಡಮಾರುತ ಎಫೆಕ್ಟ್: ಕರಾವಳಿಯಲ್ಲಿ ಭಾರೀ ಮಳೆ

ತೌಕ್ತೇ ಚಂಡಮಾರುತ ಎಫೆಕ್ಟ್: ಕರಾವಳಿಯಲ್ಲಿ ಭಾರೀ ಮಳೆ

spot_img
- Advertisement -
- Advertisement -

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಉಂಟಾಗಿರುವ ತೌಕ್ತೇ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ.

ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ವರುಣನ ಆರ್ಭಟ ಜೋರಾಗಿದ್ದು, ನಿನ್ನೆ ರಾತ್ರಿಯಿಂದ ಗಾಳಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದೆ. ಈ ಹಿನ್ನೆಯಲ್ಲಿ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಜಿಲ್ಲೆಯಾದ್ಯಂತ ರೆಡ್​ ಅಲರ್ಟ್​ ಘೋಷಣೆ ಮಾಡಿದೆ.

ಇನ್ನು ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸಾರ್ವಜನಿಕರು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಜನ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.

ಶನಿವಾರ ಮುಂಜಾನೆಯಿಂದಲೇ ಮೂಡುಬಿದಿರೆ ಹಾಗೂ ಆಸುಪಾಸಿನ ಗ್ರಾಮಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತ ಇದೆ. ಕರಿ ಮೋಡ ದಿಟ್ಟೈಸಿದೆ. ದಿನವಿಡೀ ಮಳೆ ಸುರಿಯುವ ಎಲ್ಲ ಲಕ್ಷಣ ಗೋಚರಿಸುತ್ತಿದೆ.

ಇನ್ನು ಸುಳ್ಯ, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ ತಡರಾತ್ರಿಯಿಂದಲೇ ಮಳೆ ಸುರಿಯುತ್ತಿದ್ದು, ಬೆಳಗ್ಗಿನಿಂದ ತುಂತುರು ಮಳೆ ಸುರಿಯುತ್ತಿದೆ. ಈ ಮಳೆ ಇಂದು ಮಧ್ಯಾಹ್ನದವರೆಗೆ ಸುರಿಯುವ ಸಾಧ್ಯತೆ ಇದೆ.

- Advertisement -
spot_img

Latest News

error: Content is protected !!