- Advertisement -
- Advertisement -
ತಿರುವನಂತಪುರಂ: ಕೇರಳದಲ್ಲಿ ಫೆಂಗಲ್ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ನಿಷೇಧ ಹೇರಲಾಗಿದೆ.
ಶಬರಿಮಲೆಗೆ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರು ನೀಲಕ್ಕಲ್-ಪಂಪಾ ಮೂಲಕ ತೆರಳುವಂತೆ ಸೂಚಿಸಲಾಗಿದ್ದು, ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ.
ಇನ್ನು ಈಗಾಗಲೇ ಅರಣ್ಯ ಮಾರ್ಗದ ಮೂಲಕ ಕಾಲ್ನಡಿಗೆಯಲ್ಲಿ ಆಗಮಿಸಿದ್ದ ಭಕ್ತರನ್ನು ಕೆಎಸ್‌ಆರ್‌ಟಿಸಿ ಬಸ್ ಮೂಲಕ ಪಂಪಾಗೆ ಕರೆದೊಯ್ಯಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರವಾಹ ಉಂಟಾಗುವ ಪ್ರದೇಶದಲ್ಲಿ ನೆಲೆಸಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.
- Advertisement -