Tuesday, July 1, 2025
Homeತಾಜಾ ಸುದ್ದಿಮುಂಬೈ: 120 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ

ಮುಂಬೈ: 120 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ

spot_img
- Advertisement -
- Advertisement -

ಮುಂಬೈ: ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ನಿಸರ್ಗ ಹೆಸರಿನ ಚಂಡಮಾರುತ ಗಂಟೆಗೆ 120 ಕಿಮೀ ವೇಗದಲ್ಲಿ ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದ ಕರಾವಳಿಗೆ ಬುಧವಾರ ಮಧ್ಯಾಹ್ನ ಅಪ್ಪಳಿಸಲಿದೆ.

ಆಗಲೇ ಕೊರೊನಾ ವೈರಸ್ ಸೋಂಕಿನಿಂದಾಗಿ ತತ್ತರಿಸಿರುವ ಮುಂಬಯಿಗೆ ಮಗದೊಂದು ನೈಸರ್ಗಿಕ ಅಪಾಯ ಕಾದಿದೆ. ಈ ಸಂಬಂಧ ಎಲ್ಲ ಮುನ್ನಚ್ಚೆರಿಕೆಗಳನ್ನು ವಹಿಸಲಾಗುತ್ತಿದೆ.

ಮುಂಬೈ ಸನಿಹವೇ ಈ ಚಂಡಮಾರುತ ಹಾದುಹೋಗಲಿದ್ದು, 100 ವರ್ಷಗಳಲ್ಲಿ ಇದೇ ಮೊದಲ ಬಾರಿದೆ ದೇಶದ ವಾಣಿಜ್ಯ ರಾಜಧಾನಿ ಚಂಡಮಾರುತವೊಂದಕ್ಕೆ ತುತ್ತಾಗುತ್ತಿದೆ.

ಜೂನ್. 3 ರಂದು ಕೇವಲ 12 ವಿಮಾನಗಳಿಗಷ್ಟೇ ಹಾರಾಟಕ್ಕೆ ಅವಕಾಶ ನೀಡಲಾಗಿದೆ. ಚಂಡಮಾರುತದ ಪರಿಣಾಮ ತಗ್ಗಿಸುವತ್ತವಷ್ಟೇ ನಮ್ಮ ಗಮನವಿದೆ ಎಂದು ಮುಖ್ಯಮತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

ಚಂಡಮಾರುತದ ಪ್ರಭಾವದಿಂದ ಮಹಾರಾಷ್ಟ್ರ, ಗುಜರಾತ್, ಗೋವಾ ಹಾಗೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಮುಂಬೈ ಸೇರಿ ಮಹಾರಾಷ್ಟ್ರದ 8 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

- Advertisement -
spot_img

Latest News

error: Content is protected !!