Sunday, June 7, 2026
Homeತಾಜಾ ಸುದ್ದಿಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರು ಸಜೀವ ದಹನ, ನಾಲ್ವರು ಗಂಭೀರ

ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರು ಸಜೀವ ದಹನ, ನಾಲ್ವರು ಗಂಭೀರ

- Advertisement -
- Advertisement -

ಬೆಂಗಳೂರು: ನಗರದ ಮಾಗಡಿ ರಸ್ತೆಯಲ್ಲಿನ ಫುಡ್ ಫ್ಯಾಕ್ಟರಿಯೊಂದರಲ್ಲಿ ಮಧ್ಯಾಹ್ನ 1.50ರ ಸುಮಾರಿಗೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಇಬ್ಬರು ಸಜೀವ ದಹನವಾಗಿದ್ದು, ನಾಲ್ವರು ಗಾಯಗೊಂಡಿರೋ ಘಟನೆ ನಡೆದಿದೆ.

ಬೆಂಗಳೂರಿನ ಮಾಗಡಿ ರಸ್ತೆಯ ಆಂಜನೇಯ ಥಿಯೇಟರ್ ಸಮೀಪದಲ್ಲಿನ ಎಂ.ಎಂ ಪುಡ್ ಪ್ಯಾಕ್ಟರಿಯಲ್ಲಿ ಆರು ಜನರು ಕೆಲಸ ಮಾಡುತ್ತಿದ್ದರು. ಈ ವೇಳೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಇಬ್ಬರು ಸಜೀವವಾಗಿ ದಹನವಾಗಿದ್ದಾರೆ.ಈ ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸೋ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಸಿಪಿ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಸಿಲಿಂಡರ್ ಸ್ಪೋಟದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!