Tuesday, February 27, 2024
Homeಚಿಕ್ಕಮಗಳೂರುಮಾಜಿ ಸಚಿವ, ಡಿ.ಬಿ.ಚಂದ್ರೇಗೌಡ ವಿಧಿವಶ

ಮಾಜಿ ಸಚಿವ, ಡಿ.ಬಿ.ಚಂದ್ರೇಗೌಡ ವಿಧಿವಶ

spot_img
spot_img
- Advertisement -
- Advertisement -

 

ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ (87 ವರ್ಷ) ಅವರು ನಿನ್ನೆ ಮಧ್ಯರಾತ್ರಿ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.ಕೇಂದ್ರ ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ಚಂದ್ರೇಗೌಡರು ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ಹೇಳಿವೆ.

- Advertisement -

Latest News

error: Content is protected !!