- Advertisement -
![]()
- Advertisement -
ಮಂಗಳೂರು: ದ.ಕ. ಜಿಲ್ಲೆಯ ಪ್ರತಿ ಗ್ರಾಮಗಳಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಮೂಲಗಳ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಸೂಚಿಸಿದ್ದಾರೆ.
ದ.ಕ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ್ದು, ಪ್ರತೀ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಕಲುಷಿತ ನೀರು ಪೂರೈಕೆಯಾದರೆ, ತಕ್ಷಣ ಸಮಸ್ಯೆಯನ್ನು ಸರಿಪಡಿಸಲು ಸೂಕ್ತ ಕ್ರಮಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಗ್ರಾಮ ಪಂಚಾಯತ್ ಪಿ.ಡಿ.ಒ ಗಳಿಗೆ ನಿರ್ದೇಶನ ನೀಡಬೇಕು ಎಂದರು.
- Advertisement -


