- Advertisement -
![]()
- Advertisement -
ಮಂಗಳೂರು: ಡೀಸೆಲ್ ದರ ಏರಿಕೆ, ಬಿಡಿ ಭಾಗಗಳ ಬೆಲೆ ಹೆಚ್ಚಳ, ತೆರಿಗೆ ಹಾಗೂ ವಿಮೆ ವೆಚ್ಚಗಳಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಬಸ್ ಮಾಲಕರು, ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.
ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ.ಕ. ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ, ಕಳೆದ 5 ವರ್ಷಗಳಿಂದ ಪ್ರಯಾಣ ದರ ಪರಿಷ್ಕರಣೆ ಮಾಡದ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯವಾಗಿದ್ದರೂ, ಸದ್ಯದ ಮಟ್ಟಿಗೆ ಆ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಮುಂದಿನ ಒಂದು ತಿಂಗಳ ಕಾಲ ಡೀಸೆಲ್ ಬೆಲೆಯನ್ನು ಸೂಕ್ಷ್ಮವಾಗಿ ಅವಲೋಕಿಸಿ ಹಾಗೂ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿದ ಬಳಿಕವೇ ದರ ಏರಿಕೆಯ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
- Advertisement -


