- Advertisement -
![]()
- Advertisement -
ಬೆಳ್ತಂಗಡಿ; ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದರು. ಬೆಳಗ್ಗೆ 11:45ಕ್ಕೆ ಶೃಂಗೇರಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ನಂತರ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ 2 ಗಂಟೆಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳಲು ವೇಳಾಪಟ್ಟಿ ನಿಗದಿಯಾಗಿತ್ತು. ಆದರೆ ಕೊನೆಕ್ಷಣದಲ್ಲಿ ಅವರ ಭೇಟಿ ಕಾರ್ಯಕ್ರಮ ಮುಂದೂಡಿಕೆಯಾಗಿದೆ.
ಅವರು ತುರ್ತಾಗಿ ದೆಹಲಿಗೆ ಭೇಟಿ ನೀಡಲಿರುವ ಹಿನ್ನೆಲೆ ಅವರ ಧರ್ಮಸ್ಥಳ ಬೇಟಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
- Advertisement -


