Thursday, June 4, 2026
Homeತಾಜಾ ಸುದ್ದಿBigboss ಪ್ರಿಯರಿಗೆ ಸಿಹಿಸುದ್ದಿ:ಜಾಲಿವುಡ್ ಸ್ಟುಡಿಯೋ ತೆರೆಯಲು ಡಿಸಿಎಂ ಡಿ ಕೆ ಶಿವಕುಮಾರ್ ಅನುಮತಿ

Bigboss ಪ್ರಿಯರಿಗೆ ಸಿಹಿಸುದ್ದಿ:ಜಾಲಿವುಡ್ ಸ್ಟುಡಿಯೋ ತೆರೆಯಲು ಡಿಸಿಎಂ ಡಿ ಕೆ ಶಿವಕುಮಾರ್ ಅನುಮತಿ

- Advertisement -
- Advertisement -

ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಹಾಕಲ್ಪಟ್ಟಿರುವ ಬೀಗ ತೆರೆಯಲು ಅನುಮತಿ ನೀಡುವಂತೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಪೋಸ್ಟ್ ಮಾಡಿರುವ ಡಿಸಿಎಂ, ಪರಿಸರಕ್ಕೆ ಸಂರಕ್ಷಣೆ ಆದ್ಯತೆಯಾಗಿ ಪರಿಗಣಿಸಲ್ಪಡುತ್ತಿದ್ದು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಾನುಸಾರ ಸಮಸ್ಯೆಗಳನ್ನು ಸರಿಪಡಿಸಲು ಜಾಲಿವುಡ್ ಸ್ಟುಡಿಯೋಗೆ ಕಾಲಾವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಮಧ್ಯೆ ಬೀಗ ಹಾಕಿದ್ದ ಜಿಲ್ಲಾಡಳಿತದ ಕ್ರಮವನ್ನು ಪ್ರಶ್ನಿಸಿ ಬುಧವಾರ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತಲ್ಲದೇ, 15 ದಿನಗಳ ಕಾಲಾವಕಾಶ ಕೋರಿ ಜಾಲಿವುಡ್ ಸ್ಟುಡಿಯೋಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗೆ ಪತ್ರ ಬರೆದಿತ್ತು.

ಜಾಲಿವುಡ್ ಸ್ಟುಡಿಯೋಸ್ ಬರೆದಿದ್ದ ಪತ್ರವನ್ನು ಸ್ವೀಕರಿಸಿದ್ದ ಡಿಸಿ ಯಶವಂತ್ ಗುರುಕರ್ ರಾಜ್ಯ ಮಾಲಿನ್ಯ ‌ನಿಯಂತ್ರಣ ಮಂಡಳಿಗೆ ವರ್ಗಾಯಿಸಿದ್ದರು.

ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆ ಮತ್ತು ಪೊಲೀಸ್ ಅನುಮತಿ ಪಡೆಯದ ಕಾರಣ ನೀಡಿ ರಾಮನಗರ ತಹಶೀಲ್ದಾರ್ ಮಂಗಳವಾರ ಸಂಜೆ ರಾಮನಗರ ತಾಲೂಕಿನ ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೋಗೆ ಬೀಗ ಮುದ್ರೆ ಹಾಕಿದ್ದರು.

- Advertisement -

Latest News

error: Content is protected !!