Thursday, June 25, 2026
Homeತಾಜಾ ಸುದ್ದಿಜೂನ್ 3ರಂದು ಡಿ.ಕೆ. ಶಿವಕುಮಾರ್​ ಸಿಎಂ ಆಗಿ ಪ್ರಮಾಣ ವಚನ ಸಾಧ್ಯತೆ

ಜೂನ್ 3ರಂದು ಡಿ.ಕೆ. ಶಿವಕುಮಾರ್​ ಸಿಎಂ ಆಗಿ ಪ್ರಮಾಣ ವಚನ ಸಾಧ್ಯತೆ

- Advertisement -
- Advertisement -

ಕಾಂಗ್ರೆಸ್ ಮೂಲಗಳ ಪ್ರಕಾರ, ಜೂನ್ 3 ರಂದು ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದ್ದು, ಈ ಸಂಬಂಧ ಈಗಾಗಲೇ ರಾಜ್ಯಪಾಲರ ಕಚೇರಿಗೆ ಮಾಹಿತಿ ರವಾನಿಸಲಾಗಿದೆ.

ಇತ್ತೀಚೆಗಷ್ಟೇ ಲೋಕಭವನದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಅನೌಪಚಾರಿಕ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕಾರದ ತಾತ್ಕಾಲಿಕ ವೇಳಾಪಟ್ಟಿ ಹಾಗೂ ರಾಜ್ಯಪಾಲರ ಲಭ್ಯತೆ ಕುರಿತು ಚರ್ಚಿಸಲಾಗಿದ್ದು, ಜೂನ್ 1, 3, ಮತ್ತು 5 ಹೀಗೆ ಮೂರು ಪರ್ಯಾಯ ದಿನಾಂಕಗಳನ್ನು ಪ್ರಸ್ತಾಪಿಸಲಾಗಿದೆ. ರಾಜ್ಯಪಾಲರು ತಮ್ಮ ಲಭ್ಯತೆಯನ್ನು ತಿಳಿಸಿದ ಬಳಿಕ ಅಧಿಕೃತ ದಿನಾಂಕ ಘೋಷಣೆಯಾಗಲಿದ್ದು, ಶಿವಕುಮಾರ್ ಅವರೊಂದಿಗೆ ಸುಮಾರು 12 ರಿಂದ 14 ಶಾಸಕರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!