Wednesday, June 24, 2026
Homeತಾಜಾ ಸುದ್ದಿವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ಡಿ.ಕೆ ಶಿವಕುಮಾರ್‌

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ಡಿ.ಕೆ ಶಿವಕುಮಾರ್‌

- Advertisement -
- Advertisement -

ಬೆಂಗಳೂರು : ವಿಧಾನಮಂಡಲ ಅಧಿವೇಶನದಲ್ಲಿ ಆರ್‌ಎಸ್‌ಎಸ್ ಗೀತೆಯನ್ನು ಹಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಚ್ಚರಿ ಮೂಡಿಸಿದ್ದಾರೆ.  

ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್‌ ಅವರು ಈ ಹಾಡನ್ನು ಹಾಡುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಶಾಸಕರು ಜೋರಾಗಿ ಮೇಜು ಬಡಿಯುವ ಮೂಲಕ ಇದನ್ನು ಸ್ವಾಗತಿಸಿದ್ದು, ಕಾಂಗ್ರೆಸ್ ಸದಸ್ಯರು ಮೌನವಾಗಿ ಕುಳಿತರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಉಂಟಾಗಲು ಶಿವಕುಮಾರ್ ಕಾರಣ ಎಂದು ಬಿಜೆಪಿ ಸದಸ್ಯರು ಆರೋಪಿಸಿದ ನಂತರ ಈ ಪ್ರಸಂಗ ನಡೆಯಿತು. 

ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಒಮ್ಮೆ “ಆರ್‌ಎಸ್‌ಎಸ್ ಚಡ್ಡಿ’ ಧರಿಸಿದ್ದಾಗಿ ಒಪ್ಪಿಕೊಂಡಿದ್ದನ್ನು ನೆನಪಿಸಿದಾಗ, ಶಿವಕುಮಾರ್ ಇದ್ದಕ್ಕಿದ್ದಂತೆ‌ ಆರ್‌ಎಸ್‌ಎಸ್ ಗೀತೆ ಹಾಡಿದರು.

‘ನಮಸ್ತೆ ಸದಾ ವತ್ಸಲೆ ಮಾತೃಭೂಮಿ…’ ಎಂದು ಹಾಡುತ್ತಿದ್ದಂತೆ ಬಿಜೆಪಿ ಶಾಸಕರು ಮೇಜು ತಟ್ಟಿದರು. ಸ್ಪೀಕರ್ ಯು.ಟಿ ಖಾದರ್ ಅವರು ಚೆನ್ನಾಗಿದೆ ಎಂದರು. ಈ ಸಾಲುಗಳನ್ನು ದಾಖಲೆಗಳಿಂದ ತೆಗೆದುಹಾಕಬಾರದು ಎಂದು ಆಶಿಸುತ್ತೇನೆ ಎಂದು ಬಿಜೆಪಿ ಶಾಸಕರೊಬ್ಬರು ನಗೆಯಾಡಿದರು

- Advertisement -

Latest News

error: Content is protected !!