Saturday, September 19, 2026
Homeಕರಾವಳಿಮಂಗಳೂರುಜನಾರ್ದನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ಸಿಎಂ ಡಿ.ಕೆ. ಶಿವಕುಮಾರ್

ಜನಾರ್ದನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಕರಾವಳಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಜೆ ಬಂಟ್ವಾಳಕ್ಕೆ ತೆರಳಿ, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಸಂಪುಟ ಸಭೆ ಮುಗಿಸಿ ಹೆಬ್ರಿಯಿಂದ ಮೇರಿಹಿಲ್ ಹೆಲಿಪ್ಯಾಡ್ ಮಾರ್ಗವಾಗಿ ಮಂಗಳೂರಿಗೆ ಹಿಂತಿರುಗಿದ ಮುಖ್ಯಮಂತ್ರಿಗಳು, ನೇರವಾಗಿ ರಸ್ತೆ ಮಾರ್ಗವಾಗಿ ಬಂಟ್ವಾಳದಲ್ಲಿರುವ ಪೂಜಾರಿ ಅವರ ನಿವಾಸಕ್ಕೆ ತೆರಳಿದರು. ಮನೆಗೆ ಆಗಮಿಸಿದ ಸಿಎಂ ಅವರನ್ನು ಶಾಲು ಹೊದಿಸಿ ಆತ್ಮೀಯವಾಗಿ ಅಭಿನಂದಿಸಿದ ಜನಾರ್ದನ ಪೂಜಾರಿ ಅವರು ಶುಭ ಹಾರೈಸಿದರು. ಈ ವೇಳೆ ಹಿರಿಯ ನಾಯಕರ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿಗಳು, ಅವರ ನಿವಾಸದಲ್ಲೇ ಫಲಾಹಾರ ಸ್ವೀಕರಿಸಿ ಬಳಿಕ ಮಂಗಳೂರಿಗೆ ಹಿಂತಿರುಗಿದರು.

- Advertisement -

Latest News

error: Content is protected !!