Friday, June 5, 2026
Homeತಾಜಾ ಸುದ್ದಿಪಕ್ಷದ ಸೂಚನೆ ಕಡೆಗಣಿಸಿದ್ದಕ್ಕೆ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಕಂಡ ಡಿ.ಟಿ.ಶ್ರೀನಿವಾಸ್!…

ಪಕ್ಷದ ಸೂಚನೆ ಕಡೆಗಣಿಸಿದ್ದಕ್ಕೆ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಕಂಡ ಡಿ.ಟಿ.ಶ್ರೀನಿವಾಸ್!…

- Advertisement -
- Advertisement -

ಬೆಂಗಳೂರು : ಪದವೀಧರ ಕ್ಷೇತ್ರ ಚುನಾವಣೆಹಿನ್ನೆಲೆಯಲ್ಲಿ ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಕಣಕ್ಕಿಳಿದಿದ್ದರು. ಆದರೆ ಈ ಕ್ಷೇತ್ರದಿಂದ ಈಗಾಗಲೇ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು. ಹೀಗಾಗಿ ಪಕ್ಷದ ಸೂಚನೆ ಕಡೆಗಣಿಸಿ, ಮುಜುಗರಕ್ಕೆ ಕಾರಣರಾಗಿದ್ದರಿಂದಾಗಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.

ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶ್ರೀನಿವಾಸ್ ಅವರು ಕಣದಿಂದ ಹಿಂದಕ್ಕೆ ಸರಿಯುವಂತೆ ತಿಳಿಸಿದ ಪಕ್ಷದ ಸೂಚನೆಯನ್ನು ಕಡೆಗಣಿಸಿದ್ದು ಮುಜುಗರಕ್ಕೆ ಕಾರಣರಾಗಿ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಭಾರತೀಯ ಜನತಾ ಪಾರ್ಟಿಯ ಚುನಾವಣೆಗೆ ಮುಜುಗರ ತಂದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ, ಎಂದು ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!