Saturday, May 4, 2024
Homeಕರಾವಳಿಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಡಿ ವಿ ಸದಾನಂದ ಗೌಡ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಡಿ ವಿ ಸದಾನಂದ ಗೌಡ

spot_img
- Advertisement -
- Advertisement -

ಹಾಸನ: ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅವರು ಕೂಡ ಅವರ ಹಾದಿಯನ್ನೇ ತುಳಿದಿದ್ದಾರೆ. ಡಿವಿಎಸ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.

ಹಾಸನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದಿಂದ ಗರಿಷ್ಠ ಪ್ರಯೋಜನಗಳನ್ನು ಪಡೆದಿದ್ದೇನೆ. ಅದಕ್ಕಿಂತ ನಾನು ಹೆಚ್ಚಿನದ್ದನ್ನು ಬಯೋಸೋದಿಲ್ಲ ಎಂದಿದ್ದಾರೆ.

ನನ್ನ 30 ವರ್ಷದ ರಾಜಕೀಯ ಜೀವನದಲ್ಲಿ ಬಿಜೆಪಿ ನನಗೆ ಎಲ್ಲವನ್ನು ಕೊಟ್ಟಿದೆ. ಹೀಗಾಗಿ ನಾನು ಚುನಾವಣಾ ರಾಜಕೀಯದಲ್ಲಿ ಮುಂದುವರೆಯದೇ ಇರೋದಕ್ಕೆ ನಿರ್ಧಾರ ಕೈಗೊಂಡಿದ್ದೇನೆ ಎಂದರು. ಈ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.

ನಾನು 10 ವರ್ಷ ಶಾಸಕನಾಗಿದ್ದೇನೆ. 20 ವರ್ಷ ಸಂಸದನಾಗಿ ಕಾರ್ಯ ನಿರ್ವಹಿಸಿದ್ದೇನೆ. ಒಂದು ವರ್ಷ ಮುಖ್ಯಮಂತ್ರಿಯಾಗಿದ್ದೇನೆ. 4 ವರ್ಷ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. 7 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟದಲ್ಲಿ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ನನಗೆ ಇದಕ್ಕಿಂತ ಹೆಚ್ಚಿನದ್ದು ಏನೂ ಬೇಡ ಎಂದಿದ್ದಾರೆ.

- Advertisement -
spot_img

Latest News

error: Content is protected !!