Thursday, June 25, 2026
Homeತಾಜಾ ಸುದ್ದಿಕೇಂದ್ರ ಸಚಿವ ಸದಾನಂದ ಗೌಡರಿಗೆ ಕಾಡ್ತಿದೆ ಸಿಡಿ ಭೀತಿ : ತಮ್ಮ ವಿರುದ್ಧ ಸುದ್ದಿ ಪ್ರಸಾರ...

ಕೇಂದ್ರ ಸಚಿವ ಸದಾನಂದ ಗೌಡರಿಗೆ ಕಾಡ್ತಿದೆ ಸಿಡಿ ಭೀತಿ : ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡಯಾಜ್ಞೆ ತಂದ ಡಿವಿಎಸ್

- Advertisement -
- Advertisement -

ಬೆಂಗಳೂರು : ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಆಗಲಿದೆ ಎನ್ನಲಾಗುತ್ತಿದೆ. ಈ ಸಂದರ್ಭದಲ್ಲಿಯೇ ನಕಲಿ ಸಿಡಿ ಬಿಡುಗಡೆ ಮಾಡುವ ಮೂಲಕ, ಕೇಂದ್ರ ಸಚಿವ ಡಿ ವಿ ಸದಾನಂದಗೌಡರ ತೇಜೋವಧೆ ಮಾಡುವ ಸುಳಿವು ಅವರಿಗೆ ದೊರೆತಿದೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿ, ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆಯನ್ನು ಪಡೆದಿದ್ದಾರೆ.

ರಾಜ್ಯದಲ್ಲಿ ಮಾಜಿ ಸಚಿವರೊಬ್ಬರ ರಾಸಲೀಲೆ ಸಿಡಿ ಹೊರಬರುತ್ತಿದ್ದಂತೆ ಬಾಂಬೆ ಟೀಂನ ಕೆಲ ಸಚಿವರು ತಮ್ಮ ವಿರುದ್ಧದ ತೇಜೋವಧೆಯ ಇಂತದ್ಧೇ ಸಿಡಿ ಹೊರ ಬರೋ ಮುನ್ಸೂಚನೆಯಿಂದಾಗಿ ಕೋರ್ಟ್ ನಿಂದ ತಮ್ಮ ವಿರುದ್ಧದ ಯಾವುದೇ ಸುದ್ದಿ ಪ್ರಸಾರ ಆಗದಂತೆ ತಡೆಯಾಜ್ಞೆ ತಂದಿದ್ದರು.

ಇದೀಗ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯ ಸಂದರ್ಭದಲ್ಲಿಯೇ ಕೇಂದ್ರ ಸಚಿವ ಡಿವಿ ಸದಾನಂದಗೌಡ ವಿರುದ್ಧ ಸಿಡಿ ಹೊರ ಬರಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸುಳಿವು ಪಡೆದಿರುವ ಸಚಿವರು, ಈಗ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿ, ತಮ್ಮ ವಿರುದ್ಧ ನಕಲಿ ಸಿಡಿ ಬಿಡುಗಡೆ ಸಾಧ್ಯತೆ ಇದೆ. ಹೀಗಾಗಿ ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಸಾರವನ್ನು ಕೆಲ ಪತ್ರಿಕೆ, ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆಯನ್ನು ಪಡೆದಿದ್ದಾರೆ.

- Advertisement -

Latest News

error: Content is protected !!