Friday, June 5, 2026
Homeತಾಜಾ ಸುದ್ದಿನಟ ರಿಷಭ್ ಶೆಟ್ಟಿ ಮುಕುಟಕ್ಕೆ ಮತ್ತೊಂದು ಗರಿ; ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ

ನಟ ರಿಷಭ್ ಶೆಟ್ಟಿ ಮುಕುಟಕ್ಕೆ ಮತ್ತೊಂದು ಗರಿ; ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ

- Advertisement -
- Advertisement -

ಬೆಂಗಳೂರು; ನಟ, ನಿರ್ದೇಶಕ ರಿಷಭ್ ಶೆಟ್ಟಿ ಮುಕುಟಕ್ಕೆ ಇದೀಗ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ಎನಿಸಿಕೊಂಡಿರುವ ರಿಷಭ್ ಶೆಟ್ಟಿ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅಕಾಡೆಮಿ ಭಾರತ ಚಿತ್ರರಂಗದ ಒಳ್ಳೊಳ್ಳೆ ಚಿತ್ರಗಳು, ಒಳ್ಳೆಯ ನಟರನ್ನು, ಚಿತ್ರ ತಂತ್ರಜ್ಞರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ಅವರ ಕೆಲಸಕ್ಕೆ ಶ್ಲಾಘನೆ ನೀಡಲು ನಡೆಸುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾಗಿದೆ.

ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ಕಾರ್ಯಕ್ರಮ ಇದೇ ತಿಂಗಳ 20ರಂದು ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್ ಹೊಟೇಲ್‌ನಲ್ಲಿ ನಡೆಯಲಿದೆ. ಇದರಲ್ಲಿ ರಿಷಬ್ ಶೆಟ್ಟಿ ಅವರಿಗೆ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಎಂಬ ಪ್ರಶಸ್ತಿ ಲಭಿಸಿದೆ. ಈ ಮೂಲಕ ರಿಷಬ್ ಶೆಟ್ಟಿ ಅತಿಹೆಚ್ಚು ಭರವಸೆ ಮೂಡಿಸಿದ ನಟ ಎಂಬ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ಅದ್ಭುತ ನಟನೆಗೆ ಈ ಪ್ರಶಸ್ತಿ ಲಭಿಸಿದೆ.

- Advertisement -

Latest News

error: Content is protected !!