Thursday, March 28, 2024
Homeಜ್ಯೋತಿಷ್ಯಶನಿವಾರದ ದಿನಭವಿಷ್ಯ: ಇಂದು ಯಾವ ಯಾವ ರಾಶಿಯವರಿಗೆ ಶುಭದಿನ ?

ಶನಿವಾರದ ದಿನಭವಿಷ್ಯ: ಇಂದು ಯಾವ ಯಾವ ರಾಶಿಯವರಿಗೆ ಶುಭದಿನ ?

spot_img
- Advertisement -
- Advertisement -

ಮೇಷ:
ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು.
ಶುಭ ಸಂಖ್ಯೆ: 6

ವೃಷಭ:
ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ.
ಶುಭ ಸಂಖ್ಯೆ: 9

ಮಿಥುನ:
ಯಾವದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವದು. ಸಾಮಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು.
ಶುಭ ಸಂಖ್ಯೆ: 3

ಕರ್ಕ:
ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು.
ಶುಭ ಸಂಖ್ಯೆ: 8

ಸಿಂಹ:
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ.
ಶುಭ ಸಂಖ್ಯೆ: 1

ಕನ್ಯಾ:
ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ.
ಶುಭ ಸಂಖ್ಯೆ: 4

ತುಲಾ:
ಅಭದ್ರತೆ ಕಾಡುವ ಸಂಭವವಿದೆ.ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ.ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು.
ಶುಭ ಸಂಖ್ಯೆ: 7

ವೃಶ್ಚಿಕ:
ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ.ಶುಭ
ಸಂಖ್ಯೆ: 5

ಧನು:
ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.
ಶುಭ ಸಂಖ್ಯೆ: 2

ಮಕರ:
ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ.
ಶುಭ ಸಂಖ್ಯೆ: 8

ಕುಂಭ:
ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು.
ಶುಭ ಸಂಖ್ಯೆ: 6

ಮೀನ:
ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ.
ಶುಭ ಸಂಖ್ಯೆ: 9

- Advertisement -
spot_img

Latest News

error: Content is protected !!