Tuesday, May 7, 2024
Homeಜ್ಯೋತಿಷ್ಯಭಾನುವಾರದ ದಿನಭವಿಷ್ಯ; ಯಾವ ರಾಶಿಯವರಿಗೆ ಇಂದು ಉತ್ತಮ ದಿನ ?

ಭಾನುವಾರದ ದಿನಭವಿಷ್ಯ; ಯಾವ ರಾಶಿಯವರಿಗೆ ಇಂದು ಉತ್ತಮ ದಿನ ?

spot_img
- Advertisement -
- Advertisement -

ಮೇಷ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 6

ವೃಷಭ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚುಬರಬಹುದು.
ಶುಭ ಸಂಖ್ಯೆ: 1

ಮಿಥುನ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವದು.
ಶುಭ ಸಂಖ್ಯೆ: 7

ಕರ್ಕ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ.
ಶುಭ ಸಂಖ್ಯೆ: 5

ಸಿಂಹ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು
ಶುಭ ಸಂಖ್ಯೆ: 8

ಕನ್ಯಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ.
ಶುಭ ಸಂಖ್ಯೆ: 2

ತುಲಾ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು.
ಶುಭ ಸಂಖ್ಯೆ: 4

ವೃಶ್ಚಿಕ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ.
ಶುಭ ಸಂಖ್ಯೆ: 8

ಧನು: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ.
ಶುಭ ಸಂಖ್ಯೆ: 3

ಮಕರ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವದು. ವ್ಯಾಪಾರ ಸಾಧಾರಣ.

ಕುಂಭ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ.
ಶುಭ ಸಂಖ್ಯೆ: 7

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು.
ಶುಭ ಸಂಖ್ಯೆ: 3

- Advertisement -
spot_img

Latest News

error: Content is protected !!