Monday, May 17, 2021
Homeಜ್ಯೋತಿಷ್ಯಬುಧವಾರದ ನಿತ್ಯಭವಿಷ್ಯ: ಈ ರಾಶಿಯವರಿಗೆ ವೈವಾಹಿಕ ಚಿಂತೆ ತಪ್ಪಿದ್ದಲ್ಲ..!

ಬುಧವಾರದ ನಿತ್ಯಭವಿಷ್ಯ: ಈ ರಾಶಿಯವರಿಗೆ ವೈವಾಹಿಕ ಚಿಂತೆ ತಪ್ಪಿದ್ದಲ್ಲ..!

- Advertisement -
- Advertisement -

ಮೇಷ:
ವಿನಾಕಾರಣ ನಿಂದನೆ ಸಂಭವವಿದೆ. ಖರ್ಚು ಹೆಚ್ಚಾಗುವ ಯೋಗ ಇರುವುದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು.
ಶುಭ ಸಂಖ್ಯೆ: 9

ವೃಷಭ:
ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸುಖ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು.
ಶುಭ ಸಂಖ್ಯೆ: 1

ಮಿಥುನ:
ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವುದು. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ.
ಶುಭ ಸಂಖ್ಯೆ: 8

ಕಟಕ:
ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು.
ಶುಭ ಸಂಖ್ಯೆ: 2

ಸಿಂಹ:
ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ.
ಶುಭ ಸಂಖ್ಯೆ: 7

ಕನ್ಯಾ:
ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ.
ಶುಭ ಸಂಖ್ಯೆ: 3

ತುಲಾ:
ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು.
ಶುಭ ಸಂಖ್ಯೆ: 6

ವೃಶ್ಚಿಕ:
ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಶುಭ ಸಂಖ್ಯೆ: 4

ಧನು:
ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ ತೋರಿಬಂದು ಕಿರಿಕಿರಿ ಎನಿಸಬಹುದು.
ಶುಭ ಸಂಖ್ಯೆ: 5

ಮಕರ:
ವ್ಯರ್ಥ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವುದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋ ಸೇವೆಯಿಂದ ಕಷ್ಟಪರಿಹಾರ.
ಶುಭ ಸಂಖ್ಯೆ: 9

ಕುಂಭ:
ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷ್ಯ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.
ಶುಭ ಸಂಖ್ಯೆ: 1

ಮೀನ:
ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು.
ಶುಭ ಸಂಖ್ಯೆ: 3

- Advertisement -
- Advertisment -

Latest News

error: Content is protected !!