Sunday, May 19, 2024
Homeಜ್ಯೋತಿಷ್ಯಶನಿವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭದಿನ ?

ಶನಿವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭದಿನ ?

spot_img
- Advertisement -
- Advertisement -

ಮೇಷ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 8

ವೃಷಭ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 1

ಮಿಥುನ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 9

ಕಟಕ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 2

ಸಿಂಹ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 6

ನ್ಯಾ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ತುಲಾ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 5

ವೃಶ್ಚಿಕ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶಸ್ಸು ಕಾಣುವುದು. ಶುಭ ಸಂಖ್ಯೆ: 7

ನು: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ತಿ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 4

ಮಕರ: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ: 9

ಕುಂಭ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 3

ಮೀನ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 2

- Advertisement -
spot_img

Latest News

error: Content is protected !!