Sunday, April 28, 2024
Homeಜ್ಯೋತಿಷ್ಯಸೋಮವಾರದ ನಿತ್ಯಭವಿಷ್ಯ: ಶಿವನ ಅನುಗ್ರಹದಿಂದ ಇಂದಿನ ರಾಶಿಫಲ ಹಾಗು ಪಂಚಾಂಗ ತಿಳಿಯೋಣ

ಸೋಮವಾರದ ನಿತ್ಯಭವಿಷ್ಯ: ಶಿವನ ಅನುಗ್ರಹದಿಂದ ಇಂದಿನ ರಾಶಿಫಲ ಹಾಗು ಪಂಚಾಂಗ ತಿಳಿಯೋಣ

spot_img
- Advertisement -
- Advertisement -

ಪಂಚಾಂಗ : ಸೋಮವಾರ, 15.03.2021
ಸೂರ್ಯ ಉದಯ ಬೆ.06.27 / ಸೂರ್ಯ ಅಸ್ತ ಸಂ.06.30
ಚಂದ್ರ ಉದಯ ಬೆ.07.44/ ಚಂದ್ರ ಅಸ್ತ ರಾ.08.08
ಶಾರ್ವರಿ ಸಂವತ್ಸರ / ಉತ್ತರಾಯಣ / ಶಿಶಿರ ಋತು /ಮಾಘ ಮಾಸ / ಶುಕ್ಲ ಪಕ್ಷ
ತಿಥಿ: ದ್ವಿತೀಯಾ (ಸಾ.06.50) ನಕ್ಷತ್ರ: ರೇವತಿ (ರಾ.04.44)
ಯೋಗ: ಶುಕ್ಲ (ಬೆ.07.46) ಕರಣ: ಕೌಲವ (ಸಾ.06.50)
ಮಳೆ ನಕ್ಷತ್ರ: ಶತಭಿಷಾ ಮಾಸ: ಮೀನ, ತೇದಿ: 02

ಮೇಷ:
ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.
ಶುಭ ಸಂಖ್ಯೆ: 8

ವೃಷಭ:
ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ.
ಶುಭ ಸಂಖ್ಯೆ: 3

ಮಿಥುನ:
ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವುದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ.
ಶುಭ ಸಂಖ್ಯೆ: 6

ಕರ್ಕ:
ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು.
ಶುಭ ಸಂಖ್ಯೆ: 1

ಸಿಂಹ:
ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು.
ಶುಭ ಸಂಖ್ಯೆ: 5

ಕನ್ಯಾ:
ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು.
ಶುಭ ಸಂಖ್ಯೆ: 9

ತುಲಾ:
ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ.
ಶುಭ ಸಂಖ್ಯೆ: 2

ವೃಶ್ಚಿಕ:
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು.
ಶುಭ ಸಂಖ್ಯೆ: 7

ಧನು:
ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.
ಶುಭ ಸಂಖ್ಯೆ: 4

ಮಕರ:
ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಶುಭ ಸಂಖ್ಯೆ: 8

ಕುಂಭ:
ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.
ಶುಭ ಸಂಖ್ಯೆ: 3

ಮೀನ:
ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.
ಶುಭ ಸಂಖ್ಯೆ: 1

- Advertisement -
spot_img

Latest News

error: Content is protected !!