Sunday, April 28, 2024
Homeಜ್ಯೋತಿಷ್ಯಮಂಗಳವಾರದ ನಿತ್ಯಭವಿಷ್ಯ: ಯಾವ ರಾಶಿಯವರಿಗೆ ಇಂದು ಮಂಗಳಕರವಾದ ದಿನ ?

ಮಂಗಳವಾರದ ನಿತ್ಯಭವಿಷ್ಯ: ಯಾವ ರಾಶಿಯವರಿಗೆ ಇಂದು ಮಂಗಳಕರವಾದ ದಿನ ?

spot_img
- Advertisement -
- Advertisement -

ಮೇಷ:
ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
ಶುಭ ಸಂಖ್ಯೆ: 6

ವೃಷಭ:
ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ.
ಶುಭ ಸಂಖ್ಯೆ: 1

ಮಿಥುನ:
ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸವಸ್ಯಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ.
ಶುಭ ಸಂಖ್ಯೆ: 8

ಕರ್ಕ:
ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ.
ಶುಭ ಸಂಖ್ಯೆ: 5

ಸಿಂಹ:
ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು.
ಶುಭ ಸಂಖ್ಯೆ: 9

ಕನ್ಯಾ:
ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ.
ಶುಭ ಸಂಖ್ಯೆ: 2

ತುಲಾ:
ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು.
ಶುಭ ಸಂಖ್ಯೆ: 7

ವೃಶ್ಚಿಕ:
ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ.
ಶುಭ ಸಂಖ್ಯೆ: 4

ಧನು:
ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.
ಶುಭ ಸಂಖ್ಯೆ: 3

ಮಕರ:
ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು.
ಶುಭ ಸಂಖ್ಯೆ: 4

ಕುಂಭ:
ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು.
ಶುಭ ಸಂಖ್ಯೆ: 8

ಮೀನ:
ದಿಟ್ಟತನ, ಮನೋಸ್ಥೈರ್ಯ, ನೇರ, ನಿಷ್ಟುರ ನಡೆಗಳಿಗೆ ಉತ್ತಮ ಫಲಪ್ರಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು.
ಶುಭ ಸಂಖ್ಯೆ: 5

- Advertisement -
spot_img

Latest News

error: Content is protected !!