Friday, May 3, 2024
Homeಜ್ಯೋತಿಷ್ಯಗುರುವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭದಿನ ?

ಗುರುವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭದಿನ ?

spot_img
- Advertisement -
- Advertisement -

ಮೇಷ: ಕಾರ್ಯಸಿದ್ದಿ, ಮನಃಶಾಂತಿ ಇದೆ. ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 9

ವೃಷಭ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು. ಶುಭ ಸಂಖ್ಯೆ: 1

ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 8

ಟಕ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 2

ಸಿಂಹ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 7

ನ್ಯಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 3

ತುಲಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 5

ವೃಶ್ಚಿಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 4

ಧನು: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9

ಮಕರ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 2

ಕುಂಭ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮೀನ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 3

- Advertisement -
spot_img

Latest News

error: Content is protected !!