Friday, May 3, 2024
Homeಜ್ಯೋತಿಷ್ಯಶನಿವಾರದ ನಿತ್ಯಭವಿಷ್ಯ: ಇಂದು ಈ ರಾಶಿಯವರಿಗಿದೆ ಅನುಗ್ರಹ

ಶನಿವಾರದ ನಿತ್ಯಭವಿಷ್ಯ: ಇಂದು ಈ ರಾಶಿಯವರಿಗಿದೆ ಅನುಗ್ರಹ

spot_img
- Advertisement -
- Advertisement -

ಮೇಷ:
ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
ಶುಭ ಸಂಖ್ಯೆ: 3

ವೃಷಭ:
ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಳ ಕಾರ್ಯ ಜರುಗುವವು.
ಶುಭ ಸಂಖ್ಯೆ: 9

ಮಿಥುನ:
ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು.ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು.
ಶುಭ ಸಂಖ್ಯೆ: 6

ಕಟಕ:
ವಾಸಸ್ಥಾನ,ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ.ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ.
ಶುಭ ಸಂಖ್ಯೆ: 1

ಸಿಂಹ:
ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ.
ಶುಭ ಸಂಖ್ಯೆ: 7

ಕನ್ಯಾ:
ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲಿ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ.
ಶುಭ ಸಂಖ್ಯೆ: 3

ತುಲಾ:
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು.
ಶುಭ ಸಂಖ್ಯೆ: 2

ವೃಶ್ಚಿಕ:
ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು.
ಶುಭ ಸಂಖ್ಯೆ: 5

ಧನು:
ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಶುಭ ಸಂಖ್ಯೆ: 8

ಮಕರ:
ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ.
ಶುಭ ಸಂಖ್ಯೆ: 1

ಕುಂಭ:
ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ.
ಶುಭ ಸಂಖ್ಯೆ: 4

ಮೀನ:
ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.
ಶುಭ ಸಂಖ್ಯೆ: 9

- Advertisement -
spot_img

Latest News

error: Content is protected !!