Friday, April 26, 2024
Homeಜ್ಯೋತಿಷ್ಯಸೋಮವಾರದ ರಾಶಿಫಲ: ಯಾವ ರಾಶಿಯರಿಗೆ ಇಂದು ಉತ್ತಮ ದಿನ ?

ಸೋಮವಾರದ ರಾಶಿಫಲ: ಯಾವ ರಾಶಿಯರಿಗೆ ಇಂದು ಉತ್ತಮ ದಿನ ?

spot_img
- Advertisement -
- Advertisement -

ಮೇಷ:
ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ.
ಶುಭ ಸಂಖ್ಯೆ: 6

ವೃಷಭ:
ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವುದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ.
ಶುಭ ಸಂಖ್ಯೆ: 1

ಮಿಥುನ:
ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು.
ಶುಭ ಸಂಖ್ಯೆ: 9

ಕಟಕ:
ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ.
ಶುಭ ಸಂಖ್ಯೆ: 3

ಸಿಂಹ:
ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ.
ಶುಭ ಸಂಖ್ಯೆ: 5

ಕನ್ಯಾ:
ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು.
ಶುಭ ಸಂಖ್ಯೆ: 8

ತುಲಾ:
ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.
ಶುಭ ಸಂಖ್ಯೆ: 5

ವೃಶ್ಚಿಕ:
ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಶುಭ ಸಂಖ್ಯೆ: 2

ಧನು:
ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವುದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ.
ಶುಭ ಸಂಖ್ಯೆ: 7

ಮಕರ:
ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ.
ಶುಭ ಸಂಖ್ಯೆ: 9

ಕುಂಭ:
ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.
ಶುಭ ಸಂಖ್ಯೆ: 3

ಮೀನ:
ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು.
ಶುಭ ಸಂಖ್ಯೆ: 4

- Advertisement -
spot_img

Latest News

error: Content is protected !!