Sunday, May 5, 2024
Homeಜ್ಯೋತಿಷ್ಯಹೇಗಿದೆ ನಿಮ್ಮ ಈ ದಿನದ ರಾಶಿಭವಿಷ್ಯ? ಈ ರಾಶಿಯವರಿಗೆ ಇಂದು ಶುಭಫಲ!..

ಹೇಗಿದೆ ನಿಮ್ಮ ಈ ದಿನದ ರಾಶಿಭವಿಷ್ಯ? ಈ ರಾಶಿಯವರಿಗೆ ಇಂದು ಶುಭಫಲ!..

spot_img
- Advertisement -
- Advertisement -

ಮೇಷ:
ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಶ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.
ಶುಭ ಸಂಖ್ಯೆ: 6

ವೃಷಭ:
ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು.
ಶುಭ ಸಂಖ್ಯೆ: 2

ಮಿಥುನ:
ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯಗಳು ಪರಿಹಾರವಾಗುವವು. ಶುಭ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ.
ಶುಭ ಸಂಖ್ಯೆ: 4

ಕರ್ಕ:
ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣ ತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲ ಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು.
ಶುಭ ಸಂಖ್ಯೆ: 9

ಸಿಂಹ:
ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ.
ಶುಭ ಸಂಖ್ಯೆ: 1

ಕನ್ಯಾ:
ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಶುಭ ಸಂಖ್ಯೆ: 5

ತುಲಾ:
ವಿನಯ ಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು.
ಶುಭ ಸಂಖ್ಯೆ: 6

ವೃಶ್ಚಿಕ:
ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ.
ಶುಭ ಸಂಖ್ಯೆ: 8

ಧನು:
ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು.
ಶುಭ ಸಂಖ್ಯೆ: 3

ಮಕರ:
ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.
ಶುಭ ಸಂಖ್ಯೆ: 7

ಕುಂಭ:
ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೇಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು.
ಶುಭ ಸಂಖ್ಯೆ: 4

ಮೀನ:
ವ್ಯಯಕ್ತಿಕ ಧನ ಲಾಭ, ಶುಭ ಸಮಾರಂಭ, ಸರಕಾರಿ ಕೆಲಸಗಳು ಆಗುವವು. ಉದ್ಯೋಗದಲ್ಲಿ ಉನ್ನತಿ ಇರುವುದು. ವ್ಯಾಪಾರದಲ್ಲಿ ಹಣ ಹೂಡಿಕೆಗೆ ಉತ್ತಮ. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು.
ಶುಭ ಸಂಖ್ಯೆ: 4

- Advertisement -
spot_img

Latest News

error: Content is protected !!