Thursday, May 2, 2024
Homeಜ್ಯೋತಿಷ್ಯದಿನಭವಿಷ್ಯ: ಈ ರಾಶಿಯವರಿಗೆ ಇಂದು ಆಸ್ತಿ ಖರೀದಿಯ ಯೋಗ

ದಿನಭವಿಷ್ಯ: ಈ ರಾಶಿಯವರಿಗೆ ಇಂದು ಆಸ್ತಿ ಖರೀದಿಯ ಯೋಗ

spot_img
- Advertisement -
- Advertisement -

ಮೇಷ: ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವ ಯೋಗ ಇರುವುದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 5

ವೃಷಭ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 9

ಮಿಥುನ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 1

ಕಟಕ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 8

ಸಿಂಹ: ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವುದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು. ಶುಭ ಸಂಖ್ಯೆ: 2

ಕನ್ಯಾ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 7

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 2

ವೃಶ್ಚಿಕ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 3

ನು: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 5

ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 6

ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 9

ಮೀನ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 4

- Advertisement -
spot_img

Latest News

error: Content is protected !!