Saturday, May 18, 2024
Homeಜ್ಯೋತಿಷ್ಯಬುಧವಾರದ ರಾಶಿಫಲ: ಈ ರಾಶಿಯವರಿಗೆ ಅನಾವಶ್ಯಕ ಖರ್ಚಿನ ಸಾಧ್ಯತೆ

ಬುಧವಾರದ ರಾಶಿಫಲ: ಈ ರಾಶಿಯವರಿಗೆ ಅನಾವಶ್ಯಕ ಖರ್ಚಿನ ಸಾಧ್ಯತೆ

spot_img
- Advertisement -
- Advertisement -

ಮೇಷ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 9

ವೃಷಭ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 2

ಮಿಥುನ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 5

ಕಟಕ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 8

ಸಿಂಹ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 6

ಕನ್ಯಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 3

ತುಲಾ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 7

ವೃಶ್ಚಿಕ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 3

ಧನು: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 8

ಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವದು. ಹಿರಿಯರ ಮಾತಿನಂತೆ ನಡಯುವುದು ಉತ್ತಮ. ಶುಭ ಸಂಖ್ಯೆ: 5

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 1

ಮೀನ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 7

- Advertisement -
spot_img

Latest News

error: Content is protected !!