Sunday, May 12, 2024
Homeಜ್ಯೋತಿಷ್ಯಭಾನುವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಲಾಭ-ನಷ್ಟ ?

ಭಾನುವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಲಾಭ-ನಷ್ಟ ?

spot_img
- Advertisement -
- Advertisement -

ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ.
ಶುಭ ಸಂಖ್ಯೆ: 5

ವೃಷಭ: ವಾಸಸ್ಥಾನ,ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ.ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವದು. ಹೊಸ ವ್ಯವಹಾರಗಳು ಬೇಡ.
ಶುಭ ಸಂಖ್ಯೆ: 9

ಮಿಥುನ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.
ಶುಭ ಸಂಖ್ಯೆ: 4

ಕರ್ಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು. ಶುಭ ಸಂಖ್ಯೆ: 8

ಸಿಂಹ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ.
ಶುಭ ಸಂಖ್ಯೆ: 3

ಕನ್ಯಾ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 7

ತುಲಾ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ.
ಶುಭ ಸಂಖ್ಯೆ: 2

ವೃಶ್ಚಿಕ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವದು.
ಶುಭ ಸಂಖ್ಯೆ: 6

ಧನು: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವದು. ಕೈಗೊಂಡ ಕಾರ್ಯ ಯಶ ಕಾಣುವದು.
ಶುಭ ಸಂಖ್ಯೆ: 1

ಮಕರ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವದು.
ಶುಭ ಸಂಖ್ಯೆ: 5

ಕುಂಭ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಶುಭ ಸಂಖ್ಯೆ: 9

ಮೀನ: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು.
ಶುಭ ಸಂಖ್ಯೆ: 4

- Advertisement -
spot_img

Latest News

error: Content is protected !!