Wednesday, May 1, 2024
Homeಜ್ಯೋತಿಷ್ಯಶನಿವಾರದ ನಿತ್ಯಭವಿಷ್ಯ: ಸಂಕಷ್ಟದಲ್ಲೂ 'ಶನಿ ಮಹಾತ್ಮ'ನ ಅನುಗ್ರಹವಿದೆ ಈ ರಾಶಿಗೆ

ಶನಿವಾರದ ನಿತ್ಯಭವಿಷ್ಯ: ಸಂಕಷ್ಟದಲ್ಲೂ ‘ಶನಿ ಮಹಾತ್ಮ’ನ ಅನುಗ್ರಹವಿದೆ ಈ ರಾಶಿಗೆ

spot_img
- Advertisement -
- Advertisement -

ಮೇಷ:
ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಶುಭ ಸಂಖ್ಯೆ:5

ವೃಷಭ:
ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.
ಶುಭ ಸಂಖ್ಯೆ:7

ಮಿಥುನ:
ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು.
ಶುಭ ಸಂಖ್ಯೆ:1

ಕಟಕ:
ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ.
ಶುಭ ಸಂಖ್ಯೆ:9

ಸಿಂಹ:
ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ.
ಶುಭ ಸಂಖ್ಯೆ:4

ಕನ್ಯಾ:
ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುತ್ತವೆ. ಅಪೇಕ್ಷಿತ ಧನಸಹಾಯ ದೊರೆಯುವುದು.
ಶುಭ ಸಂಖ್ಯೆ:2

ತುಲಾ:
ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.
ಶುಭ ಸಂಖ್ಯೆ:7

ವೃಶ್ಚಿಕ:
ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವುದು. ಹಿರಿಯರ ಮಾತಿನಂತೆ ನಡೆಯುವುದು ಉತ್ತಮ.
ಶುಭ ಸಂಖ್ಯೆ:8

ಧನು:
ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಳಕಾರ್ಯ ಆಗಲಿದೆ. ಹೆಸರು, ಕಡಲೆ ದಾನ ಮಾಡಿರಿ.
ಶುಭ ಸಂಖ್ಯೆ:3

ಮಕರ:
ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ.
ಶುಭ ಸಂಖ್ಯೆ:6

ಕುಂಭ:
ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು.
ಶುಭ ಸಂಖ್ಯೆ:7

ಮೀನ:
ವಾದ-ವಿವಾದ, ಹಟ ಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ.
ಶುಭ ಸಂಖ್ಯೆ:9

- Advertisement -
spot_img

Latest News

error: Content is protected !!