ಮೇಷ: ನಿಮ್ಮ ಉದ್ಯೋಗದಲ್ಲಿ ಯಶಸ್ಸು ಗೋಚರಿಸಲಿದೆ. ಸಹೋದ್ಯೋಗಿಗಳೊಂದಿಗೆ ಒಳ್ಳೆಯ ಬಾಂಧವ್ಯ ವೃದ್ಧಿ. ಹಿರಿಯರ ಹಾರೈಕೆ. ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಶುಭಸಂಖ್ಯೆ: 8
ವೃಷಭ: ಸಾಂಸಾರಿಕ ಗೊಂದಲಗಳನ್ನು ತಾಳ್ಮೆಯಿಂದ ಬಗೆಹರಿಸಿ. ಧನಾತ್ಮಕ ಚಿಂತನೆಯನ್ನು ಮಾಡಿ. ಹಳೆಯ ಸ್ನೇಹಿತನ ಭೆೇಟಿ. ಶುಭಸಂಖ್ಯೆ: 9
ಮಿಥುನ: ಹಣಕಾಸಿನ ಪರಿಸ್ಥಿತಿ ಬಿಗಡಾಯಿಸಲಿದೆ. ವೃತ್ತಿರಂಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ. ಅಕ್ಕ ತಂಗಿಯರೊಂದಿಗೆ ಭೋಜನ. ಶುಭಸಂಖ್ಯೆ: 1
ಕರ್ಕ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭಸಂಖ್ಯೆ: 7
ಸಿಂಹ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭಸಂಖ್ಯೆ : 3
ಕನ್ಯಾ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭಸಂಖ್ಯೆ: 8
ತುಲಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಯಶಸ್ಸು. ಉನ್ನತ ವಿದ್ಯಾಭ್ಯಾಸ ಪೂರ್ಣ. ಸಂಗಾತಿಯೊಂದಿಗೆ ವಿರಸ. ಆರೋಗ್ಯದಲ್ಲಿ ಸುಧಾರಣೆ. ಶುಭಸಂಖ್ಯೆ: 8
ವೃಶ್ಚಿಕ: ಮನೆ ಬದಲಾವಣೆ ಸಾಧ್ಯತೆ. ಭೂಮಿ ವಿವಾದದ ತೀರ್ಪು ಪ್ರಕಟ. ನಿರಾಸೆ. ಕುಟುಂಬದೊಂದಿಗೆ ಸಮಾಲೋಚನೆ. ಶುಭಸಂಖ್ಯೆ: 9
ಧನಸ್ಸು: ಕೆಲವೊಂದು ಘಟನೆಗಳು ನಿಮ್ಮ ಸಹನೆಯನ್ನು ಪರೀಕ್ಷಿಸಲಿದೆ. ಸಾರ್ವಜನಿಕವಾಗಿ ಅವಮಾನ. ಸ್ನೇಹಿತನಿಂದ ಸಮಾಧಾನ. ಶುಭಸಂಖ್ಯೆ: 6
ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭಸಂಖ್ಯೆ: 2
ಕುಂಭ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟಪರಿಹಾರ. ಶುಭಸಂಖ್ಯೆ: 8
ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭಸಂಖ್ಯೆ 3