Sunday, April 28, 2024
Homeಜ್ಯೋತಿಷ್ಯಶನಿವಾರದ ದಿನಭವಿಷ್ಯ: ಇಂದಿನ ಮೇಷ-ಮೀನದವರೆಗಿನ ರಾಶಿಫಲ, ಶುಭಸಂಖ್ಯೆ ತಿಳಿಯೋಣ..

ಶನಿವಾರದ ದಿನಭವಿಷ್ಯ: ಇಂದಿನ ಮೇಷ-ಮೀನದವರೆಗಿನ ರಾಶಿಫಲ, ಶುಭಸಂಖ್ಯೆ ತಿಳಿಯೋಣ..

spot_img
- Advertisement -
- Advertisement -

ಮೇಷ:
ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು.
ಶುಭ ಸಂಖ್ಯೆ: 6

ವೃಷಭ:
ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.
ಶುಭ ಸಂಖ್ಯೆ: 1

ಮಿಥುನ:
ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಶುಭ ಸಂಖ್ಯೆ: 9

ಕರ್ಕ:
ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಶುಭ ಸಂಖ್ಯೆ: 4

ಸಿಂಹ:
ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು.
ಶುಭ ಸಂಖ್ಯೆ: 7

ಕನ್ಯಾ:
ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು.
ಶುಭ ಸಂಖ್ಯೆ: 8

ತುಲಾ:
ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು.
ಶುಭ ಸಂಖ್ಯೆ: 3

ವೃಶ್ಚಿಕ:
ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯ ಕಾಣುವವು. ಗ್ರಹ ಸೌಖ್ಯವಿರುವುದು.
ಶುಭ ಸಂಖ್ಯೆ: 5

ಧನು:
ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು.
ಶುಭ ಸಂಖ್ಯೆ: 9

ಮಕರ:
ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವುದು ಗುರುಸ್ತೋತ್ರ ಪಾರಾಯಣ ಮಾಡಿರಿ.
ಶುಭ ಸಂಖ್ಯೆ: 2

ಕುಂಭ:
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು.
ಶುಭ ಸಂಖ್ಯೆ: 6

ಮೀನ:
ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.
ಶುಭ ಸಂಖ್ಯೆ: 8

- Advertisement -
spot_img

Latest News

error: Content is protected !!