ಮೇಷ:
ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.
ಶುಭ ಸಂಖ್ಯೆ: 5
ವೃಷಭ:
ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ.
ಶುಭ ಸಂಖ್ಯೆ: 8
ಮಿಥುನ:
ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ.
ಶುಭ ಸಂಖ್ಯೆ: 1
ಕರ್ಕ:
ಪರಿವಾರದಲ್ಲಿ ಹೊಸಕಳೆ ಬರುವದು. ಕುಟುಂಬದಲ್ಲಿ ಸೌಖಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು.
ಶುಭ ಸಂಖ್ಯೆ: 9
ಸಿಂಹ:
ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು.ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು.
ಶುಭ ಸಂಖ್ಯೆ: 1
ಕನ್ಯಾ:
ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.
ಶುಭ ಸಂಖ್ಯೆ: 7
ತುಲಾ:
ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು.
ಶುಭ ಸಂಖ್ಯೆ: 3
ವೃಶ್ಚಿಕ:
ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ.
ಶುಭ ಸಂಖ್ಯೆ: 4
ಧನು:
ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವುದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು.
ಶುಭ ಸಂಖ್ಯೆ: 6
ಮಕರ:
ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.
ಶುಭ ಸಂಖ್ಯೆ: 5
ಕುಂಭ:
ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ.
ಶುಭ ಸಂಖ್ಯೆ: 3
ಮೀನ:
ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.
ಶುಭ ಸಂಖ್ಯೆ: 7